Club News
  • No News reported.

Honouring Nalini Ramesh by Kumta

Honouring Nalini Ramesh
24 Nov, 2019

Beneficiaries : 22

Cost : 2500

President : Suresh Bhat

Rotarian Team : NA

Non Rotary Partner : Uttara Kannada Jilla Kannada Sahitya Parishat

Description :
ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು‌ ಕುಮಟಾದ ನಾದಶ್ರೀ ಕಲಾ ಕೇಂದ್ರದಲ್ಲಿ ನವೆಂಬರ್ 24 ಭಾನುವಾರದಂದು ಮಧ್ಯಾಹ್ನ 3.30 ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಕುಮಟಾ ರೋಟರಿ ಸಹಕಾರದಲ್ಲಿ ನಡೆಯುವ ಈ ಕಾರ್ಯಕ್ರಮದ ಉದ್ಘಾಟನೆಯನ್ನು 'ಜನಮಾಧ್ಯಮ' ಪತ್ರಿಕೆ ಸಂಪಾದಕ ಅಶೋಕ ಹಾಸ್ಯಗಾರ ಅವರು ಉದ್ಘಾಟಿಸಲಿದ್ದಾರೆ. ಜಿಲ್ಲಾ ಕ.ಸಾ.ಪ ಅಧ್ಯಕ್ಷ ಅರವಿಂದ ಕರ್ಕಿಕೋಡಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಂಸರ್ಭದಲ್ಲಿ ಹಿರಿಯ ಯಕ್ಷಗಾನ ತಜ್ಞೆ, ಸಾಹಿತಿ ಡಾ. ವಿಜಯನಳಿನಿ ರಮೇಶ್ ಅವರಿಗೆ 2019 ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಕುಮಾರ ಚಲ್ಯ ಅವರು ಪ್ರದಾನ ಮಾಡಲಿದ್ದಾರೆ. ಅತಿಥಿಯಾಗಿ ಕುಮಟಾ ರೋಟರಿ ಅಧ್ಯಕ್ಷ ಸುರೇಶ್ ಭಟ್ ಅವರು ಉಪಸ್ಥಿತರಿರಲಿದ್ದಾರೆ. ಎಲ್ಲರೂ ಈ ಸಮಾರಂಭಕ್ಕೆ ಆಗಮಿಸಬೇಕು ಎಂದು ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಅರವಿಂದ ಕರ್ಕಿಕೋಡಿ ಸಾರ್ವಜನಿಕರಲ್ಲಿ ಕೋರಿದ್ದಾರೆ.

Images :
Honouring Nalini Ramesh Honouring Nalini Ramesh Honouring Nalini Ramesh

Tags:
Others